ನವದೆಹಲಿ : ಕುತುಬ್ ಮಿನಾರ್ ಸಂಕೀರ್ಣದಲ್ಲಿ ಹಿಂದೂ ಮತ್ತು ಜೈನರ ಆರಾಧನಾ ಮೂರ್ತಿಗಳನ್ನು ಪುನರ್ಸ್ಥಾಪಿಸಲು ಕೋರಿರುವ ಮೇಲ್ಮನವಿಗೆ ಸಂಬಂಧಿಸಿದ ಆದೇಶವನ್ನು ದೆಹಲಿಯ ಸಾಕೇತ್ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.ಮೆಹ್ರೌಲಿಯಲ್ಲಿರುವ ಕುತುಬ್ ಮಿನಾರ್ ಸಂಕೀರ್ಣದೊಳಗೆ ಇರುವ ಕುವ್ವಾತ್-ಉಲ್-ಇಸ್ಲಾಂ ಮಸೀದಿಯನ್ನು ದೇವಾಲಯದ ಸಂಕೀರ್ಣದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿದೆ.ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು ಮಂಗಳವಾರ ಮೇಲ್ಮನವಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದರು. ಮೇಲ್ಮನವಿಗೆ ಸಂಬಂಧಿಸಿದಂತೆ ಜೂನ್ 9ರಂದು ತೀರ್ಪು ನೀಡಲಾಗುವುದು