ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಸಾಮಾನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ.