ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೆಲ ಬಿಜೆಪಿ ಶಾಸಕರು ನಕಲಿ ವೀಡಿಯೋವನ್ನು ಸೃಷ್ಟಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು, ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ನಕಲಿ ವೀಡಿಯೋವನ್ನು ಬಿಜೆಪಿಯ ಸಂಸದರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಸುಬ್ರತ್ ಪಾಠಕ್ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ