ಲಕ್ನೋ (ಅ 07) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಅನವಶ್ಯಕವಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ಭಲೇ ನಾಟಕವನ್ನೇ ನಡೆಸಿದ್ದಾರೆ ಎಂದು ಉತ್ತರಪ್ರದೇಶದ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಕಿಡಿಕಾರಿದ್ದಾರೆ. Photo Courtesy: Google ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡುವ ಸಲುವಾಗಿ ಸೋಮವಾರವೇ ಪ್ರಿಯಾಂಕಾ ಗಾಂಧಿ ಲಖೀಂಪುರ್ ಖೇರಿಗೆ ತಲುಪಿದ್ದರು. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬಂಧಿಸಿ ಗೆಸ್ಟ್ಹೌಸ್ನಲ್ಲಿ ಗೃಹ ಬಂಧನದಲ್ಲಿ ಇಡಲಾಗಿತ್ತು.