ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯ (ಇ.ಡಿ.) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.ಹೀಗಿರುವಾಗ ಇತ್ತ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆಯನ್ನು ಖಂಡಿಸಿ ದಿಲ್ಲಿಯ ಇ.ಡಿ. ಮುಖ್ಯ ಕಚೇರಿ ಹಾಗೂ ದೇಶದ ವಿವಿಧ 25 ಇ.ಡಿ. ಕಚೇರಿಗಳ ಮುಂದೆ ಬಲಪ್ರದರ್ಶನ ಆರಂಭಿಸಿದೆಕೇಂದ್ರವು ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಗಾಂಧಿಗಳ ವಿರುದ್ಧ ಇ.ಡಿ.ಯನ್ನು ಛೂ ಬಿಟ್ಟಿದೆ ಎಂಬುದು ಕಾಂಗ್ರೆಸ್ಸಿಗರ ಆರೋಪ.