ನವದೆಹಲಿ : ಪ್ರಧಾನಿ ಮೋದಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಬಿಜೆಪಿಯ ನಾಯಕ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ಕಾರ್ಯವೈಖರಿಯನ್ನು ಹೊಗಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾನುವಾರ ನಾಗ್ಪುರದಲ್ಲಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಮನೆಯನ್ನು ಸರಿಯಾಗಿ ನೋಡಿಕೊಳ್ಳದವರು ದೇಶವನ್ನು ನೋಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪರೋಕ್ಷವಾಗಿ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದರು.