ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ ಗಾಂಧಿ ಅವರು ಗುಜರಾತ್ ವಿಧಾನಸಭೆಯ ಚುನಾವಣೆಯಲ್ಲಿ ಪ್ರಯೋಗಿಸಿದ ಧಾರ್ಮಿಕ ಪ್ರಯೋಗಕ್ಕೆ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ.ಗುಜರಾತಿನಲ್ಲಿ ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿದ್ದ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಧಾರ್ಮಿಕ ಭಾವನೆ ಬಳಕೆ ಮಾಡಿದ್ದರು.ಇದೇ ಪ್ರಯೋಗವನ್ನು ಕರ್ನಾಟಕ ರಾಜ್ಯದಲ್ಲಿ ಪ್ರಯೋಗಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಹುಲ್