ನವದೆಹಲಿ: ಅಜ್ಜಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ತುರ್ತು ಪರಿಸ್ಥಿತಿ ಹೇರಿದ್ದು ಒಂದು ತಪ್ಪು ನಿರ್ಧಾರವಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ತಪ್ಪು. ಅಜ್ಜಿ ತಪ್ಪು ಮಾಡಿದ್ದರು ಎಂದು ಒಪ್ಪಿಕೊಂಡಿದ್ದಾರೆ.‘ಅದು ಸಂಪೂರ್ಣ ತಪ್ಪು. ನನ್ನ ಅಜ್ಜಿ ಅಂದು ಮಾಡಿದ್ದು ಪ್ರಮಾದವಾಗಿತ್ತು. ಆದರೆ ಕಾಂಗ್ರೆಸ್ ಭಾರತದ ಸಾಂಸ್ಥಿಕ ಚೌಕಟ್ಟನ್ನು ಬುಡಮೇಲು