ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಆಂತರಿಕ ಚುನಾವಣೆಗೆ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದೆ. ಆದರೆ ರಾಹುಲ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಕಡಿಮೆ. ಹೀಗಾಗಿ ರಾಹುಲ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರೆಲ್ಲರೂ ಉಪಸ್ಥಿತರಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಪಂಜಾಬ್