Widgets Magazine

ಇಂದು ಮಧ್ಯಾಹ್ನ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಸಂವಾದ

ನವದೆಹಲಿ| Krishnaveni K| Last Modified ಶನಿವಾರ, 16 ಮೇ 2020 (09:51 IST)
ನವದೆಹಲಿ: ಲಾಕ್ ಡೌನ್ 3 ಮುಕ್ತಾಯವಾಗುತ್ತಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಗೆ ಕ್ಷಣ ಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಾಧ್ಯಮಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

 

ಇಂದು ಮಧ್ಯಾಹ್ನ 12 ಗಂಟೆಗೆ ಮಾಧ್ಯಮಗಳ ಜತೆ ವಿಡಿಯೋ ಮುಖೇನ ಸುದ್ದಿಗೋಷ್ಠಿ ನಡೆಸಲಿರುವ ರಾಹುಲ್ ಗಾಂಧಿ ಕೊರೋನಾ ನಿಯಂತ್ರಣ ವಿಚಾರವಾಗಿ ಮಾತನಾಡುವ ಸಾಧ‍್ಯತೆಯಿದೆ.
 
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದು, ಕೊರೋನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ರಾಹುಲ್ ವಿಮರ್ಶಿಸುವ ಸಾಧ‍್ಯತೆಯಿದೆ.
ಇದರಲ್ಲಿ ಇನ್ನಷ್ಟು ಓದಿ :