ನವದೆಹಲಿ (ಸೆ. 06): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ಮುಂದಾಗಲಿದ್ದಾರೆ. ಇದೇ ಸೆಪ್ಟೆಂಬರ್ 9 ಮತ್ತು 10ರಂದು ಎರಡು ದಿನಗಳ ಕಾಲ ಅವರು ಕಣಿವೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿ ವೇಳೆ ಅವರು ಮಾತಾ ವೈಷ್ಣೋ ದೇವಿ ದೇವಾಲಯ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಅವರು ಭೇಟಿ ನೀಡುತ್ತಿರುವುದು ವಿಶೇಷ.