ರಾಯ್ ಬರೇಲಿ: ಸೋನಿಯಾ ಗಾಂಧಿ ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ರಾಯ್ ಬರೇಲಿಯಲ್ಲಿ ಉಷ್ಣವಿದ್ಯುತ್ ನಿಗಮ (ಎನ್ ಟಿಪಿಸಿ) ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.