ಕನ್ನಡ ಸಿನಿರಂಗ ಮಾತ್ರವಲ್ಲ ಎಲ್ಲ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿ ಎಲ್ಲರನ್ನು ತಮ್ಮತ್ತ ಆಕರ್ಷಿಸಿದ ವ್ಯಕ್ತಿ ಯುವರತ್ನ ಡಾ.ಪುನೀತ್ ರಾಜ್ಕುಮಾರ್. ಅವರು ಸಾವನ್ನಪ್ಪಿದಾಗಿನಿಂದ ಅವರ ಮನೆಗೆ ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ಕೊಟ್ಟು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಅಶ್ವಿನಿ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ.ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ