ಜೈಪುರ : ರಾಜಸ್ಥಾನದಲ್ಲಿ ಪುರುಷರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯ ಅತ್ಯಾಚಾರ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಾಲ್ ಹೇಳಿದ್ದಾರೆ.ಅತ್ಯಾಚಾರ ಪ್ರಕರಣಗಳಲ್ಲಿ ನಮ್ಮ ರಾಜ್ಯ ನಂಬರ್ ಒನ್ ಆಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ನಮ್ಮ ರಾಜ್ಯ ಏಕೆ ಮುಂದಿದೆ ಎಂಬುವುದರಲ್ಲಿ ಯಾವುದೇ ಸಂದೇಹವಿಲ್ಲ. ಏಕೆಂದರೆ ರಾಜಸ್ಥಾನವು ಪುರುಷರು ಹೆಚ್ಚಾಗಿರುವ ರಾಜ್ಯವಾಗಿದೆ ಎಂದು ಹೇಳಿದ್ದಾರೆ.ಶಾಂತಿ ಧರಿವಾಲ್ ಅವರ ಅತ್ಯಾಚಾರ ಹೇಳಿಕೆ ಇದೀಗ ಭಾರೀ ವಿವಾದವನ್ನು ಸೃಷ್ಟಿಸಿದ್ದು, ರಾಜಸ್ಥಾನದ