ನವದೆಹಲಿ: ಸಂಸತ್ತಿನ ಮೇಲ್ಮನೆಯ ಮೂರು ಸ್ಥಾನಗಳಿಗೆ ಗುಜರಾತ್ ನಲ್ಲಿ ನಡೆಯುತ್ತಿರುವ ಚುನಾವಣೆ ದೇಶದ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಅಷ್ಟಕ್ಕೂ ಯಾಕೆ ಈ ಚುನಾವಣೆಗೆ ಇಷ್ಟೆಲ್ಲಾ ಕಸರತ್ತು? ಈ ವರ್ಷಾಂತ್ಯಕ್ಕೆ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ತವರೂರು ಗುಜರಾತ್ ನಲ್ಲಿ ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಚಾರ.ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೋದಿ ಪ್ರಧಾನಿಯಾದ ಮೇಲೆ ಈ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ