ನವದೆಹಲಿ : ಶುಕ್ರವಾರದಿಂದ ಎಲ್ಲೆಡೆ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ವೃತ ಆರಂಭವಾಗಿದೆ. ಈ ಪವಿತ್ರ ತಿಂಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ರಂಜಾನ್ ಹಿನ್ನೆಲೆ ಟ್ವೀಟ್ ಮಾಡಿರುವ ಮೋದಿ, ಹಬ್ಬಕ್ಕೆ ಶುಭಾಶಯ ತಿಳಿಸುತ್ತಾ, ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಹಾಗೂ ಸಾಮರಸ್ಯ ತರಲಿ. ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ ಎಂದಿದ್ದಾರೆ. ಇಸ್ಲಾಂ ಸಮುದಾಯದ ಅತಿ ದೊಡ್ಡ ಹಬ್ಬವಾದ ರಂಜಾನ್ ತಿಂಗಳಲ್ಲಿ ಹೆಚ್ಚಿನವರು