ಲಕ್ನೋ : ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಶ್ರೀನಗರ ಮಧ್ಯೆ ಯಾವುದೇ ತಪಾಸಣೆ ನಡೆಯಲಿಲ್ಲ. ಜೊತೆಗೆ ಯೋಧರು ಸಾಮಾನ್ಯ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು. ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ