ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ಪಕ್ಷದ ಬಗ್ಗೆ ಕೇಳಿಬರುತ್ತಿರುವ ಅಪವಾದವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಚುನಾವಣೆ ಗೆಲ್ಲಲು ಕ್ಯಾಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ನೆರವು ಪಡೆದಿದೆ ಎಂಬ ವರದಿಗಳನ್ನು ಅವರು ತಳ್ಳಿ ಹಾಕಿದ್ದಾರೆ.