ಬೆಂಗಳೂರು: ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದ ನಡುವೆ ಎದ್ದು ಹೋಗಿ ಪ್ರಧಾನಿ ಮೋದಿಯನ್ನು ಅಪ್ಪಿಕೊಂಡ ವಿಚಾರ ಇದೀಗ ವೈರಲ್ ಆಗಿದೆ.ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ರಾಹುಲ್ ನಡೆ ಬಗ್ಗೆ ಟ್ವೀಟ್ ಮಾಡಿದ್ದಾರೆ.ಹಿಂದೊಮ್ಮೆ ರಾಹುಲ್ ನಾನು ಮಾತನಾಡಿದರೆ ಸಂಸತ್ತಿನಲ್ಲಿ ಭೂಕಂಪವಾಗುತ್ತದೆ ಎಂದಿದ್ದರು. ಇದನ್ನೇ ಉಲ್ಲೇಖಿಸಿ ಟ್ವೀಟ್ ಮಾಡಿರುವ ರಮ್ಯಾ ಬಿಜೆಪಿಯವರಿಗೆ ಈಗ ನಿಜವಾಗಿಯೂ