ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ರಂಜನ್ ಗೊಗೊಯ್

ನವದೆಹಲಿ| pavithra| Last Modified ಬುಧವಾರ, 3 ಅಕ್ಟೋಬರ್ 2018 (14:00 IST)
ನವದೆಹಲಿ : ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಮಾಣವಚನ ಸ್ವೀಕರಿಸಿದ ಗೊಗೊಯ್ ಅವರು ಸುಪ್ರೀಂಕೋರ್ಟ್ ನ ಮೊದಲ ಮುಖ್ಯ ನ್ಯಾಯಾಧೀಶರೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ.


ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಅವರು ಸೇವಾ ಹಿರಿತನದಲ್ಲಿ ಮೊದಲಿಗರಾಗಿದ್ದಾರೆ. ಇವರ ಹೆಸರನ್ನು ನಿರ್ಗಮನ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರು ಶಿಫಾರಸು ಮಾಡಿದ್ದರು. ಇದಕ್ಕೆ ರಾಷ್ಟ್ರಪತಿ ಅಂಕಿತ ನೀಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :