ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಇವತ್ತು ಅಕ್ಷರಶಃ ಉದ್ವಿಗ್ನ ವಾತಾವರಣ. ದೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರಬೀಳಲಿದ್ದು, 1.5 ಲಕ್ಷಕ್ಕೂ ಅಧಿಕ ಭಕ್ತರು ಪಂಚಕುಲದಲ್ಲಿ ಜಮಾಯಿಸಿದ್ದಾರೆ. ನಿನ್ನೆಯೇ ಭಕ್ತರು ಪಂಚುಕುಲಕ್ಕೆ ಆಗಮಿಸಿದ್ದು, ತೀರ್ಪು ಬರುವವರೆಗೂ ಜಾಗ ಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ಧಾರೆ. ವಿಶೇಷ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಪಂಚಕುಲದ ಕೋರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.ಹರ್ಯಾಣ