ಭೋಪಾಲ್ : ಲಾಕ್ ಡೌನ್ ನಡುವೆಯೂ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಕಣ್ಣುಗಳಿಗೆ ಚಾಕುವಿನಿಂದ ಇರಿದ ಘಟನೆಯೋಂದು ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ. 7 ವರ್ಷದ ಬಾಲಕಿಯನ್ನು ಅಪಹರಿಸಿ ಅರಣ್ಯ ಮಧ್ಯದಲ್ಲಿರುವ ಪಾಳು ಬಿದ್ದ ಮನೆಗೆ ಎಳೆದೊಯ್ದು, ಆಕೆಯ ಕೈಗಳನ್ನು ಹಗ್ಗದಿಂದ ಕಟ್ಟಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯ ಕಣ್ಣುಗಳನ್ನು ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.