ಜೈಪುರ : ಸರ್ಕಾರಿ ಶಾಲಾ ಶಿಕ್ಷಕನೊಬ್ಬ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಹೈಪುರದ ಜುಂಝುನು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಅಶ್ಲೀಲ ಸಂದೇಶಗಳನ್ನು, ಫೋಟೊಗಳನ್ನು ಮತ್ತು ವಿಡಿಯೋಗಳನ್ನು ಕಳಿಸಿದ್ದನಂತೆ. ಅದಾದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ, ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ. ಆದರೆ ಸಂತ್ರಸ್ತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಮೇಲಾದ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ.