ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪುಣೆ ನಗರದ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಟ್ರಂಕ್ ಟೆಂಪೋಗೆ ಢಿಕ್ಕಿಯಾಗಿದೆ. ಈ ವೇಳೆ ಟೆಂಪೋದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡವರಲ್ಲಿ ಒಬ್ಬನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ