ಭೂಸ್ವಾಧೀನ ಮಸೂದೆಗಾಗಿ ರೈತರಿಗಾಗಿ ಮಾಡಿದ ಹೋರಾಟದ ರೀತಿಯಲ್ಲಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲಿದೆ ಎಂದು ಭರವಸೆ ನೀಡಿದರು. ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದರು. ರೈತರ ಹಕ್ಕಿಗಾಗಿ ಹೋರಾಟ ಮಾಡಿದಂತೆ ಕಾರ್ಮಿಕರ ಹಿತಕ್ಕಾಗಿ ಬಿಜೆಪಿ, ಮೋದಿ ಮತ್ತು ಆರೆಸ್ಸೆಸ್ನೊಂದಿಗೆ ಹೋರಾಡಲು ಸಿದ್ದ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಉದ್ದೇಶಪೂರ್ವಕವಾಗಿ ಕಾರ್ಮಿಕ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವುದು ಕಾರ್ಮಿಕರಲ್ಲಿ ಅತೃಪ್ತಿ ಮೂಡಿಸಿದೆ