ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ