ನವದೆಹಲಿ : ಅನ್ ಲಾಕ್ 1 ಜೂನ್ 30ಕ್ಕೆ ಕೊನೆಗೊಳ್ಳುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅನ್ ಲಾಕ್ 2 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಜುಲೈ 31ರವರೆಗೆ ಶಾಲಾಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ. ಹಾಗೇ ಮೆಟ್ರೋ ರೈಲು, ಸಿನಿಮಾ ಥಿಯೇಟರ್ ಗಳು, ಜಿಮ್, ಸ್ವಿಮ್ಮಿಂಗ್ ಪೂಲ್, ಪಾರ್ಕ್ ಗಳು, ಬಾರ್, ಸಭಾ ಭವನಗಳು ತೆರೆಯುವಂತಿಲ್ಲ ಎಂದು ತಿಳಿಸಿದೆ.ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.