ಜೈಪುರ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ನ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವುದರೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದಲ್ಲಿ ಭಾರೀ ಬಿಕ್ಕಟ್ಟು ಉಂಟಾಗಿದ್ದು, ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಡ್ರಾಮಾ ಪ್ರಾರಂಭಿಸಿದ್ದಾರೆ.ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು