ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ ಪಕ್ಷಗಳು ಭೌತಿಕವಾಗಿ ರೋಡ್ ಶೋ, ಸಭೆ-ಸಮಾರಂಭ, ರ್ಯಾಲಿಗಳನ್ನು ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.ಕೇಂದ್ರ ಚುನಾವನಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಪಂಚರಾಜ್ಯಗಳ ಚುನಾವಣಾ ಮುಖ್ಯಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯ ಬಳಿಕ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ