ಮುಂಬೈ : ಇನ್ನೆರಡು ವರ್ಷಗಳಲ್ಲಿ ಮುಂಬೈನ ರಸ್ತೆಗಳು ಗುಂಡಿ ಮುಕ್ತವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ನಾನು ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಶಾಸಕರ ಜೊತೆ ಸಭೆ ನಡೆಸಿದ್ದೇನೆ. ಜಿಯೋಪಾಲಿಮರ್ ತಂತ್ರವನ್ನು ಬಳಸಿ ಗುಂಡಿಗಳನ್ನು ಮುಚ್ಚುವ ಬಗ್ಗೆ ಚರ್ಚಿಸಿದ್ದು, ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.ಸದ್ಯ 236 ಕಿ.ಮೀ ರಸ್ತೆಗಳಿಗೆ ಸಿಮೆಂಟ್