ತನ್ನ ಮನೆ ಮೆಲೆ ಪೊಲೀಸರು ದಾಳಿ ಮಾಡಿದ ಬಳಿಕ ನಾಪತ್ತೆಯಾಗಿದ್ದ ರೌಡಿ ನಾಗನನ್ನ ಕೊನೆಗೂ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅರ್ಕಾಟ್`ನಲ್ಲಿ ನಾಗನನ್ನ ಬಂಧಿಸಿದ್ದಾರೆ ಎನ್ನಲಾಗಿದೆ. ಎಸಿಪಿ ರವಿಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ತೋಟದ ಮನೆಯಲ್ಲಿ ಅಡಗಿದ್ದ ನಾಗ ಫೋನ್ ಮಾಡಲು ಹೆದ್ದಾರಿಗೆ ಬಂದಿದ್ದಾಗ ಒಂದೂವರೆ ಕಿ.ಮೀ ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ನಾಗನ ಜೊತೆ ಮಕ್ಕಳಾದ ಶಾಸ್ತ್ರೀ ಮತ್ತು ಗಾಂಧಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.