ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಮುವಾರದಂದು ಅಂತ್ಯವಾಗಿದೆ. ಚುನಾವಣೆ ಸಮರದಲ್ಲಿ ಒಟ್ಟು 178 ಕೋಟಿ ರೂಪಾಯಿಗಳ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಅಂದರೆ 112.89 ಕೋಟಿ ರೂಪಾಯಿಗಳ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಅಕ್ರಮ ಹಣವನ್ನು ಇತರ ರಾಜ್ಯಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ. ಕೇರಳ ರಾಜ್ಯದಲ್ಲಿ 24.66 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸೂಕ್ತ ಪರಿಶೀಲನೆಯ ನಂತರ ಯಾವುದೇ