ನವದೆಹಲಿ : ಇತ್ತೀಚೆಗೆ ದಿನೇದಿನೇ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವ ಹಿನ್ನಲೆಯಲ್ಲಿ ಅದನ್ನು ಸಮತೋಲನ ಮಾಡಲು ಕೇಂದ್ರ ಸರ್ಕಾರ ಹೊಸದೊಂದು ಯೋಜನೆ ರೂಪಿಸಿದೆ ಎಂಬುದಾಗಿ ತಿಳಿದುಬಂದಿದೆ. ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ವ್ಯಾಪಾರದಲ್ಲಿ ಸಮಸ್ಯೆ ಉದ್ಭವಿಸಬಹುದು ಎಂದು ಮನಗೊಂಡ ಕೇಂದ್ರ ಸರ್ಕಾರ ಎನ್ ಆರ್ ಐ ನೆರವು ಪಡೆಯವ ನಿರ್ಧಾರ ಮಾಡಿದೆ. ಈ ಬಗ್ಗೆ ಈಗಾಗಲೇ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ಸೆಂಟ್ರಲ್ ಬ್ಯಾಂಕ್ ಅಧಿಕಾರಿಗಳು ಚರ್ಚಿಸಿದ್ದಾರೆ ಎನ್ನಲಾಗಿದೆ.