ನವದೆಹಲಿ : ಪಾಕ್ ಕ್ರಿಕೆಟ್ ಆಟಗಾರ ಶೋಯೆಬ್ ಮಲಿಕ್ ಪತ್ನಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವ್ಯಕ್ತಿಯೊಬ್ಬ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಟ್ವೀಟ್ ಮೂಲಕ ವ್ಯಂಗ್ಯವಾಗಿ ಶುಭಾಷಯ ಕೋರಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಸಾನಿಯಾ ಆ ವ್ಯಕ್ತಿಗೆ ಗರಂ ಆಗಿ ತಿರುಗೇಟು ನೀಡಿದ್ದಾರೆ. ಪಾಕಿಸ್ತಾನವು ಆ. 14ರಂದು ಅಂದರೆ ನಿನ್ನೆ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಸಾನಿಯಾಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ನಿಮ್ಮ ಸ್ವಾತಂತ್ರ್ಯ ದಿನ ಇಂದೇ ಅಲ್ಲವೇ?