ತಮಿಳುನಾಡಿನಲ್ಲಿ ಇಂದು ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದಿಂದ ವಿ.ಕೆ. ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರನ್ನು ಸಿಎಂ ಪಳನಿಸ್ವಾಮಿ ನೇತೃತ್ವದ ಸಭೆಯಲ್ಲಿ ವಜಾಗೊಳಿಸಲಾಗಿದೆ. ಇಂದು ಎಐಎಡಿಎಂಕೆ ಕಚೇರಿಯಲ್ಲಿ ಸಿಎಂ ಪಳನಿಸ್ವಾಮಿ ನೇತೃತ್ವದಲ್ಲಿ ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತಂತೆ ಚರ್ಚಿಸಲು ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಶಶಿಕಲಾ ಮತ್ತು ದಿನಕರನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ವಜಾಗೊಳಿಸಲಾಯಿತು. ಕೆಲ ದಿನಗಳ ಹಿಂದೆ ಸಿಎಂ ಪಳನಿಸ್ವಾಮಿ ಮತ್ತು ಪನ್ನೀರ್ಸೆಲ್ವಂ