ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ಬಗ್ಗೆ ವದಂತಿಗಳು ಹಬ್ಬಿದೆ.ಶಶಿಕಲಾ ಆಗಸ್ಟ್ 14 ರಂದು ಬಿಡುಗಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯದಲ್ಲಿ ಆಕೆ ಬಿಡುಗಡೆಯಾಗುತ್ತಿಲ್ಲ ಎಂದಿದ್ದಾರೆ.ಶಶಿಕಲಾ ಬಿಡುಗಡೆಯಾಗುತ್ತಿದ್ದಾರೆ ಎಂಬ ವದಂತಿ ಟ್ವಿಟರ್ ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಹಲವರು ಮೆಮೆಗಳ