ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ, ಸುಪ್ರೀಂಕೋರ್ಟ್ ವಿಧಿಸಿರುವ 10 ಕೋಟಿ ರೂ. ದಂಡ ಪಾವತಿಸುವಲ್ಲಿ ವಿಫಲವಾದಲ್ಲಿ ಹೆಚ್ಚುವರಿಯಾಗಿ 13 ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.