ನವದೆಹಲಿ: 8 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಐವರು ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಅಲ್ಲದೆ, ಬಾಲಕಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಹೋದರನನ್ನು ಥಳಿಸಿದ್ದಾರೆ. ದೇವಾಲಯಕ್ಕೆ ತೆರಳಿ ಮನೆಗೆ ಮರಳುತ್ತಿದ್ದಾಗ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ.ಈ ಬಗ್ಗೆ ಯಾರಿಗೂ ಬಾಯ್ಬಿಡದಂತೆ ಸಹೋದರನಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಘಟನೆ ತಿಳಿಯುತ್ತಿದ್ದಂತೇ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.