ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷದ ರಕ್ತದಲ್ಲಿದೆ ಅದನ್ನು ಯಾರು ತೆಗೆದುಹಾಕಲು ಸಾಧ್ಯವಿಲ್ಲ. ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷದ ಡಿಎನ್ಎ ಆಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸುವುದು ಮಾತ್ರವಲ್ಲದೇ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಧೂಳಿಪಟ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ. ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಬಿಜೆಪಿ ಮತ್ತು ಅದರ ಮಾರ್ಗದರ್ಶಿ ಸಂಸ್ಥೆಯಾದ ಆರೆಸ್ಸೆಸ್ನ್ನು ಧ್ವಂಸಗೊಳಿಸಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಆರೆಸ್ಸೆಸ್ನಿಂದ