ನವದೆಹಲಿ : ಪಂಜಾಬ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಉಂಟಾದ ಭದ್ರತಾ ವೈಫಲ್ಯಕ್ಕೆ ಫಿರೋಜ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನೇರ ಕಾರಣ. ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕರ್ತವ್ಯವನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ಸಮಿತಿ ವರದಿ ಸಲ್ಲಿಸಿದೆ.ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ರಚಿಸಿದ ವಿಶೇಷ ಸಮಿತಿಯೂ ತನ್ನ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ