ಖಾಲಿಸ್ತಾನ ಪರ ಬೆಂಬಲಿಗರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಮೇಲೆ ದಾಳಿ ಮಾಡಿರುವುದರಿಂದ, ಮತ್ತೆ ಪ್ರತಿಭಟನೆಗಳು ನಡೆಯಬಹುದು ಎಂಬ ವರದಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಕಚೇರಿಗೆ ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೊ ಪೊಲೀಸ್ ಡಿಪಾರ್ಟ್ಮೆಂಟ್ನ ವಿಶೇಷ ದಳದವರು ಭದ್ರತೆ ಕೈಗೊಂಡಿದ್ದಾರೆ. ಖಾಲಿಸ್ತಾನ ಪರ ಘೋಷಣೆ ಕೂಗುತ್ತಾ ಕಾನ್ಸುಲೇಟ್ ಕಚೇರಿಗೆ ನುಗ್ಗಿದ್ದ ಪ್ರತಿಭಟನಾಕಾರರು, ಕಚೇರಿ ಆವರಣದಲ್ಲಿ ‘ಖಾಲಿಸ್ತಾನ ಧ್ವಜ’ವನ್ನು ಹಾರಿಸಲು ಯತ್ನಿಸಿದ್ದರು. ನಂತರ ಕಬ್ಬಿಣದ ರಾಡು ಬಳಸಿ ಕಚೇರಿಯ