ನವದೆಹಲಿ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳವಾರ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ. ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.ಅವರಲ್ಲಿ ಒಬ್ಬ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ಮೊಬೈಲ್ ಅಂಗಡಿಯಲ್ಲಿ ಕೆಲಸ