ಮಸೀದಿಗಳ ಮೇಲೆ ಆಕ್ಷೇಪಾರ್ಹ ಬರಹಗಳು ಹಾಗೂ ವಸ್ತುಗಳನ್ನು ಎಸೆದು ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ 7 ಮಂದಿ ಕಿಡಿಗೇಡಿಗಳನ್ನು ಉತ್ತರ ಪ್ರದೇಶದ ಅಯೋಧ್ಯೆ ಪೊಲೀಸರು ಬಂಧಿಸಿದ್ದಾರೆ. ಅಯೋಧ್ಯೆ ನಿವಾಸಿಗಳಾದ ಮಹೇಶ್ ಕುಮಾರ್ ಮಿಶ್ರಾ, ಪ್ರತ್ಯುಶ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್, ಬ್ರಿಜೇಶ್ ಪಾಂಡೆ, ಶತ್ರುಘ್ಞ ಪ್ರಜಾಪತಿ ಹಾಗೂ ವಿಮಲ್ ಪಾಂಡೆ ಬಂಧಿತ ಆರೋಪಿಗಳು. ಘಟನೆಯಲ್ಲಿ ಒಟ್ಟು 11 ಜನ ಭಾಗಿಯಾಗಿದ್ದು, 7 ಮಂದಿಯನ್ನು ಬಂಧಿಸಲಾಗಿದೆ ಉಳಿದ