ನವದೆಹಲಿ: ರಾಜ್ಯದಲ್ಲಿ ಬರಗಾಲದಿಂದಾಗಿ ಜನತೆ ತತ್ತರಿಸಿದ್ದರೂ ತೆಲಂಗಾಣ ರಾಜ್ಯ ರಚನೆಯಾದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ನೂರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.