ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಲಿರುವ ಶರದ್ ಅರವಿಂದ್ ಬೊಬ್ಡೆ

ನವದೆಹಲಿ| pavithra| Last Modified ಶುಕ್ರವಾರ, 18 ಅಕ್ಟೋಬರ್ 2019 (12:00 IST)
ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಶರದ್ ಅರವಿಂದ್ ಬೊಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ.
ಸುಪ್ರೀಂ ಕೋರ್ಟ್ ನ ಈಗಿನ ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್ ಅವರು ಮುಂದಿನ ಮುಖ್ಯ ನ್ಯಾಯಾಧೀಶರಾಗಿ ಶರದ್ ಅರವಿಂದ್ ಬೊಬ್ಡೆ ಅವರನ್ನು ಶಿಫಾರಸ್ಸು ಮಾಡಿ ಕೇಂದ್ರಕ್ಕೆ ಪತ್ರ ಬರೆದ ಹಿನ್ನಲೆಯಲ್ಲಿ ನವೆಂಬರ್ 18 ರಂದು ಶರದ್ ಅರವಿಂದ್ ಬೊಬ್ಡೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


ಮುಂಬೈ ಮತ್ತು ನಾಗ್ಪುರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಇವರು, ಬಾಂಬೆ ಹೈಕೋರ್ಟ್ ಪೀಠದ ಹೆಚ್ಚವರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಇವರು ಏಫ್ರಿಲ್ 23, 2021ರವರೆಗೆ ಶರದ್ ಅರವಿಂದ್ ಬೊಬ್ಡೆ  ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :