ಬಿಹಾರದ ರಾಜಕಾರಣದಲ್ಲಿ ಮಧ್ಯಪ್ರವೇಶಿಸಿ ರಾಷ್ಟ್ರೀಯ ವಿರೋಧಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವಂತೆ ಜೆಡಿಯು ಬಂಡಾಯ ನಾಯಕ ಶರದ್ ಯಾದವ್ಗೆ ಜೀವ ಬೆದರಿಕೆ ಪತ್ರವೊಂದು ಬಂದಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆ ಸದಸ್ಯ ಶರದ್ ಯಾದವ್ ನಿವಾಸಕ್ಕೆ ಬಂದ ಪತ್ರದ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದು ಯಾದವ್ ಕಚೇರಿಯ ಸಿಬ್ಬಂದಿಗಳು ತಿಳಿಸಿದ್ದಾರೆ. ಬಿಹಾರ ಸರಕಾರ ಮತ್ತು ಹಿಂದು ಹಿತಾಸಕ್ತಿಗಳಿಗೆ ವಿರುದ್ಧವಾಗಿ ಮಾತನಾಡಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು