ಸುನಂದಾ ಪುಷ್ಕರ್ ಸಾವು ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ| Krishnaveni K| Last Modified ಮಂಗಳವಾರ, 3 ಜುಲೈ 2018 (12:13 IST)
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅಸಹಜ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.


ದೆಹಲಿಯ ಹೋಟೆಲ್ ಒಂದರಲ್ಲಿ ಅಸಹಜ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಸುನಂದಾ ಪುಷ್ಕರ್ ಪ್ರಕರಣದಲ್ಲಿ ಶಶಿ ತರೂರ್ ರನ್ನು ಆರೋಪಿಯೆಂದು ಕೆಲವು ದಿನಗಳ ಹಿಂದೆ ದೆಹಲಿ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.


ಇದರ ಹಿನ್ನಲೆಯಲ್ಲಿ ತರೂರ್ ದೆಹಲಿ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತರೂರ್ ಮಾನಸಿಕವಾಗಿ ಹಿಂಸೆ ನೀಡಿದ್ದಕ್ಕೆ ಸುನಂದಾ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದರು ಎಂದು ಅವರ ಮೇಲೆ ಆರೋಪ ಹೊರಿಸಲಾಗಿತ್ತು. ಆದರೆ ಅದನ್ನು ಶಶಿ ತರೂರ್ ಆಧಾರ ರಹಿತ ಎಂದು ತಳ್ಳಿ ಹಾಕಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :