ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಎರಡೂವರೆ ವರ್ಷದ ಮಹಾ ಆಘಾಡಿ ಸರ್ಕಾರ ಪತನಗೊಂಡಿದೆ. ಬುಧವಾರ ಸುಪ್ರೀಂಕೋರ್ಟ್ನಲ್ಲಿ ಸುದೀರ್ಘ ವಾದ-ಪ್ರತಿವಾದ ನಡೀತು. ಆದರೆ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿತು. ಇದರಿಂದ ಸೋಲೊಪ್ಪಿಕೊಂಡ ಉದ್ಧವ್ ಠಾಕ್ರೆ ಇವತ್ತಿನ ವಿಶ್ವಾಸಮತಕ್ಕೂ ಮುನ್ನ ನಿನ್ನೆ ರಾತ್ರಿಯೇ ರಾಜೀನಾಮೆ ಘೋಷಿಸಿದ್ರು. ಫೇಸ್ಬುಕ್ನಲ್ಲಿ ಲೈವ್ ಬರುವ ಮೂಲಕ ತಮ್ಮ ರಾಜೀನಾಮೆ ಘೋಷಿಸಿದ ಠಾಕ್ರೆ, ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡುತ್ತಿರುವುದಾಗಿ ಹೇಳಿದ್ರು.