ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಶಿವಸೇನೆ ಮೈತ್ರಿಕೂಟದಿಂದ ಹೊರಬೀಳಲಿದ್ದು, ಮುಂಬರುವ 2019 ರಲ್ಲಿ ನಡೆಯವಲಿರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶಿವಸೇನೆ ಅಧ್ಯಕ್ಷ ಉದ್ಭವ್ ಠಾಕ್ರೆ , ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷದೊಂದಿಗೆ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ, ಸದಾ ಬಿಜೆಪಿ ನಾಯಕರನ್ನು ಟೀಕಿಸುತ್ತಾ