ನವದೆಹಲಿ : ಜಗತ್ತಿನ ಅತಿದೊಡ್ಡ ತಾಳೆ ಎಣ್ಣೆ ಉತ್ಪಾದಕ ರಾಷ್ಟ್ರವಾದ ಇಂಡೋನೇಷ್ಯಾ, ಸ್ಥಳೀಯ ಎಣ್ಣೆ ಕೊರತೆ ಪೂರೈಸಲು ಏ.28 ರಿಂದ ವಿದೇಶಗಳಿಗೆ ಖಾದ್ಯತೈಲ ರಫ್ತು ಮಾಡುವುದನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಹೀಗಾಗಿ ಈಗಾಗಲೇ ಉಕ್ರೇನ್-ರಷ್ಯಾ ಯುದ್ಧದ ಕಾರಣದಿಂದಾಗಿ ಗಗನಕ್ಕೇರಿರುವ ಇನ್ನಷ್ಟುಏರಿಕೆಯಾಗುವ ಭೀತಿ ಎದುರಾಗಿದೆ.ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಹಣದುಬ್ಬರದಲ್ಲಿ ದಾಖಲೆಯ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ತಮ್ಮ ದೇಶದ ನಾಗರಿಕರಿಗೆ ಆಹಾರೋತ್ಪನ್ನಗಳು ಕೈಗೆಟುಕುವ ದರದಲ್ಲಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ